Breaking
Tue. Dec 17th, 2024
Spread the love

ಆತ್ಮೀಯ ರೈತ ಬಾಂಧವರೇ,
ಈಗಾಗಲೇ ಬೆಳೆ ವಿಮೆ ಕಟ್ಟುವ ದಿನಾಂಕವನ್ನು ಸರ್ಕಾರ ಬಿಡುಗಡೆ ಮಾಡಿದ್ದು ಯಾವ ಬೆಳೆಗೆ ಎಷ್ಟು ಬೆಳೆ ವಿಮೆ ಕಟ್ಟಬೇಕು ಎನ್ನುವುದರ ಸಂಪೂರ್ಣ ಮಾಹಿತಿ ನಿಮ್ಮ ಮೊಬೈಲ್ ನಲ್ಲಿಯೇ ಪಡೆದುಕೊಳ್ಳಬಹುದು. ಈ ಬೆಳೆ ವಿಮೆ ಮುಂಗಾರು ಸೀಸನ್ ಗೆ ಆದಲ್ಲಿ ನೀವು ಬೆಳೆಯುತ್ತಿರುವ ಬೆಳೆಯ 2% ಹಾಗೂ ಹಿಂಗಾರು ಸೀಸನ್ ನಲ್ಲಿ ಬೆಳೆಯುತ್ತಿದ್ದಲ್ಲಿ ನೀವು ಬೆಳೆಯುತ್ತಿರುವ ಬೆಳೆಯ 1.5% ಹಣವನ್ನು ಬೆಳೆಬಿಮೆಯಾಗಿ ಕಟ್ಟುತ್ತೀರಾ. ಅಂತೆಯೇ ತೋಟಗಾರಿಕೆ ಬೆಳೆಯನ್ನು ಬೆಳೆಯುತ್ತಿದ್ದಲ್ಲಿ 5% ಹಣವನ್ನು ಕಟ್ಟಬೇಕು. ಹಾಗಾದರೆ ಯಾವ ಬೆಳೆಗೆ ಎಷ್ಟು ಎಷ್ಟು ಹಣವನ್ನು ಬೆಳೆವಿಮೆ ಆಗಿ ಕಟ್ಟಬೇಕೆಂದು ಈ ಕೆಳಗೆ ತಿಳಿಯೋಣ.ಹಂತ 1 – ಮೊದಲಿಗೆ ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ ಪ್ರೆಸ್ ಮಾಡಿದ ನಂತರ
https://samrakshane.karnataka.gov.in
ನಿಮಗೆ ಈ ಪುಟವು ದೊರೆಯುತ್ತದೆ. ಆಮೇಲೆ kharif ಮೇಲೆ ಕ್ಲಿಕ್ ಮಾಡಿ.ಹಂತ 2 – ನಂತರ ಫಾರ್ಮರ್ಸ್ ಕಾಲಂನಲ್ಲಿ crops you can insure ಎಂದು ಕಾಣುತ್ತಿರುವ ಶಬ್ದಗಳ ಮೇಲೆ ಕ್ಲಿಕ್ ಮಾಡಿ.ಹಂತ 3 – ನಂತರ ನಿಮ್ಮ ಜಿಲ್ಲೆ ತಾಲೂಕು ಹೋಬಳಿ ಹಾಗೂ ನಿಮ್ಮ ಗ್ರಾಮವನ್ನು ಸೆಲೆಕ್ಟ್ ಮಾಡಿ. ಮುಂದೆ ಎಂದು ಕೊಡಿ.ಹಂತ 4 – ನಂತರ ನಿಮ್ಮ ಜಿಲ್ಲೆಯಲ್ಲಿ ಮತ್ತು ನಿಮ್ಮ ಗ್ರಾಮದಲ್ಲಿ ಯಾವ ಯಾವ ಬೆಳೆಗೆ ಎಷ್ಟು ಎಷ್ಟು ಹಣವನ್ನು ಕಟ್ಟಬೇಕೆಂದು ಅಲ್ಲಿ ನೀಡುತ್ತಾರೆ ಅದನ್ನು ಗಮನಿಸಿ ಅದನ್ನು ಗಮನಿಸಿದ ನಂತರವೇ ನೀವು ಬೆಳೆ ವಿಮೆಯನ್ನು ಕಟ್ಟಿರೆ ಅಥವಾ ಬೇರೆ ಬೆಳೆ ವಿಮೆಯ ಹಣವನ್ನು ನೀವು ಕಟ್ಟಿ ಮೋಸ ಹೋಗಬೇಡಿ.

04.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಉತ್ತರ ಕನ್ನಡ ಉತ್ತಮ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಜಾಸ್ತಿಯೇ ಇರಬಹುದು. ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು, ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಶಿವಮೊಗ್ಗ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ ಜಿಲ್ಲಾಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ, ಬಿಸಿಲು ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಮುಂಗಾರು ಮಾರುತಗಳು ಸಾಮಾನ್ಯವಾಗಿ ಆಸ್ಟ್ರೇಲಿಯಾ ಪಶ್ಚಿಮ ಕರಾವಳಿಯಿಂದ ಹಿಂದೂಮಹಾಸಾಗರದ ಮೂಲಕ ಅರಬ್ಬಿ ಸಮುದ್ರ ಸೇರುವುದು ವಾಡಿಕೆ.* *ಆದರೆ ಈಗಿನ ಸ್ಥಿತಿ ಗಮನಿಸಿದರೆ ದಕ್ಷಿಣ ದ್ರುವ ಕಡಿಯಿಂದ ಮಡಗಾಸ್ಕರ್ ಕರಾವಳಿ ಮೂಲಕ ಅರಬ್ಬಿ ಸಮುದ್ರಕ್ಕೆ ಸೇರುತ್ತಿದೆ. ಮುಂಗಾರು ಲಯ ತಪ್ಪುತ್ತಿರುವಂತೆ ತೋರುತ್ತಿದೆ.ಈಗಿನಂತೆ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಎರಡು ದಿನಗಳ ಕಾಲ ಮುಂದಕ್ಕೆ ಹೋಗಿ ಜುಲೈ 6 ರಿಂದ ಮಳೆಯ ಮುನ್ಸೂಚನೆ ಇದೆ. ನಿರೀಕ್ಷೆತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ಈಗಿನ ಗುಡುಗು ಸ್ಥಳೀಯ ಮೋಡಗಳ ಸೇರುವಿಕೆಯಿಂದಲೂ ಸಾಧ್ಯತೆ ಇದೆ.

03.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಅಲ್ಲಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೊಡ ಹಾಗೂ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಮೈಸೂರು ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ಹಾವೇರಿ, ಧಾರವಾಡ, ಬೆಳಗಾವಿ, ಚಿಕ್ಕೋಡಿ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನ ಪ್ರಕಾರ ಜುಲೈ 5ರಿಂದ ರಾಜ್ಯದ ಒಳನಾಡು ಭಾಗಗಳಲ್ಲಿಯೂ ಮಳೆ ಆರಂಭವಾಗುವ ಮುನ್ಸೂಚೆನೆ ಇದೆ. ಕೆಲವು ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ.
ಜುಲೈ 10ರಿಂದ ದಕ್ಷಿಣ ಒಳನಾಡು, ಕೊಡಗು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.

02.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ತೀರ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಕೊಡಗು ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಅಲ್ಲಲ್ಲಿ ಸಾಮಾನ್ಯ ಹಾಗೂ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಾಮಾನ್ಯ ಮಳೆಯ ಇದ್ದರೆ, ಉಳಿದ ಹೆಚ್ಚಿನ ಭಾಗಗಳಲ್ಲಿ ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಧಾರವಾಡ, ಬೆಳಗಾವಿ, ಚಿಕ್ಕೋಡಿ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.ಈಗಿನಂತೆ ಇವತ್ತಿನಿಂದ ಜುಲೈ 3ರ ತನಕ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಕಡಿಮೆ ಇದ್ದರೂ, ಜುಲೈ 4 ರಿಂದ ಹೆಚ್ಚಾಗುವ ಮುನ್ಸೂಚನೆ ಇದೆ. ಜುಲೈ 5 ರಿಂದ ರಾಜ್ಯದ ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿಯೂ ಮಳೆಯ ಮುನ್ಸೂಚೆನೆ ಇದೆ. ನಂತರ ಕ್ರಮೇಣ ರಾಜ್ಯದಾದ್ಯಂತ ಮುಂಗಾರು ಚುರುಕಾಗುವ ಲಕ್ಷಣಗಳಿವೆ.

01.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ :

ಕಾಸರಗೋಕ್ರ್ ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮಳೆಯ ಮುನ್ಸೂಚೆನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಸ್ವಲ್ಪ ಜಾಸ್ತಿಯೇ ಇರಬಹುದು. ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೊಪ್ಪಳ ಹಾಗೂ ಗದಗ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.ಈಗಿನ ಪ್ರಕಾರ ರಾಜ್ಯದ ಬಹುತೇಕ ಭಾಗಗಳಲ್ಲಿ ಜುಲೈ 5ರಿಂದ ಮಳೆ ಹೆಚ್ಚಾಗುವ ಲಕ್ಷಣಗಳಿವೆ.
ಕರಾವಳಿಯಲ್ಲಿ ಜುಲೈ 1 ರಿಂದ ಜುಲೈ 3ರ ತನಕ ಮಳೆಯ ಪ್ರಮಾಣ ಕಡಿಮೆ ಇರುವ ಸಾಧ್ಯತೆಗಳಿದ್ದು, ನಂತರ ಹೆಚ್ಚಾಗುವ ಮುನ್ಸೂಚನೆ ಇದೆ.
ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಮುಂಗಾರು ದುರ್ಬಲಗೊಂಡಿರುವುದರಿಂದ ಮುಂದಿನ ದಿನಗಳಲ್ಲಿ ಕೇರಳದಲ್ಲಿ ಮಳೆ ಕ್ಷೀಣಿಸಲಿದೆ.

Related Post

Leave a Reply

Your email address will not be published. Required fields are marked *