ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ (ಸ್ವೀಪ್) ವತಿಯಿಂದ ಮತದಾನದ ಮಹತ್ವ ಕುರಿತು ‘ಯುವ ಮತದಾರರಿಂದ ಮಾನವ ಸರಪಳಿ’ ಕಾರ್ಯಕ್ರಮವು ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆಯಿತು.
ಗದಗ ನಗರದ ವಿವಿಧ ಕಾಲೇಜಿನ ನೂರಾರು ಯುವ ಮತದಾರರು ಮಾನವ ಸರಪಳಿಯಲ್ಲಿ ಪಾಲ್ಗೊಂಡು ಗಮನ ಸೆಳೆದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಈ ಬಾರಿ ಜಿಲ್ಲೆಯಲ್ಲಿ ಹೊಸದಾಗಿ 26 ಸಾವಿರ ಮಂದಿ ಯುವ ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಿರುವುದು ವಿಶೇಷವಾಗಿದೆ ಎಂದು ತಿಳಿಸಿದರು.
18 ವರ್ಷ ಪೂರ್ಣಗೊಂಡ ಅರ್ಹ ಮತದಾರರೆಲ್ಲರೂ ಮತದಾನ ಮಾಡುವುದು ಅತೀ ಮುಖ್ಯವಾಗಿದೆ. ಪ್ರತಿ ಮತವೂ ಅಮೂಲ್ಯವಾಗಿದೆ ಎಂದು ಜಿಲ್ಲಾಧಿಕಾರಿ ಅವರು ನುಡಿದರು. ಚುನಾವಣೆಗೆ ಸಂಬಂಧಿಸಿದಂತೆ ಸಹಾಯವಾಣಿ ಸಂಖ್ಯೆ 1950 ಅಥವಾ ಸಿವಿಜಲ್ ಆ್ಯಪ್ ಮೂಲಕ ದೂರು ದಾಖಲಿಸಬಹುದಾಗಿದೆ ಜೊತೆಗೆ ಚುನಾವಣೆಗೆ ಸಂಬಂಧಿಸಿದ ಮಾಹಿತಿಗಳನ್ನು ನೀಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ವೈಶಾಲಿ ಅವರು ವಿವರಿಸಿದರು. ಜಿಲ್ಲೆಯಲ್ಲಿ ಶೇಕಡಾವಾರು ಮತದಾನ ಹೆಚ್ಚಳಕ್ಕೆ ಯುವ ಮತದಾರರ ಪಾತ್ರ ಹೆಚ್ಚಿನದಾಗಿದೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಮತದಾನ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಾಗ ಪ್ರಜಾಪ್ರಭುತ್ವ ಬಲಪಡಿಸಲು ಸಾಧ್ಯ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಪ್ರತಿಪಾದಿಸಿದರು.
ಪ್ರಜಾಪ್ರಭುತ್ವದಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪೌರರಾದ ನಾವು, ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ, ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿ ಹಿಡಿಯುತ್ತೇವೆಂದು ಮತ್ತು ಪ್ರತಿಯೊಂದು ಚುನಾವಣೆಯಲ್ಲಿ ನಿರ್ಭೀತರಾಗಿ ಮತ್ತು ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರೇಪಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೇ ಮತ ಚಲಾಯಿಸುತ್ತೇವೆಂದು ಪ್ರತಿಜ್ಞಾ ವಿಧಿ ಬೋಧಿಸಿದರು.
ಜಿ.ಪಂ.ಸಿಇಒ ಎಸ್.ಭರತ್ ಅವರು ಮಾತನಾಡಿ ಮೇ 7 ರಂದು ನಡೆಯುವ ಮತದಾನದಂದು ಅರ್ಹರೆಲ್ಲರೂ ಮತ ಚಲಾಯಿಸಬೇಕು. ಅರ್ಹರು ಮತದಾನದಿಂದ ವಂಚಿತರಾಗಬಾರದು ಎಂದು ತಿಳಿಸಿದರು. ಚುನಾವಣಾ ಪ್ರಕ್ರಿಯೆಯಲ್ಲಿ ಯುವಜನರು ಸಡಗರ-ಸಂಭ್ರಮದಿಂದ ಮತ ಹಕ್ಕು ಚಲಾಯಿಸಬೇಕು. ಪ್ರತಿಯೊಂದು ಮತವೂ ಸಹ ಅತ್ಯಮೂಲ್ಯವಾಗಿದ್ದು ಜಿಲ್ಲೆಯಲ್ಲಿ ಶೇಕಡಾವಾರು ಮತದಾನ ಹೆಚ್ಚಳಕ್ಕೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಸ್ವೀಪ್ ಸಮಿತಿ ಅಧ್ಯಕ್ಷರು ಕೋರಿದರು.
ಜಿಲ್ಲಾ ಚುನಾವಣಾ ರಾಯಭಾರಿ ಹಾಗೂ ಅಂತರಾಷ್ಟ್ರೀಯ ಕುಸ್ತಿಪಟು ಪ್ರೇಮಾ ಹುಚ್ಚಣ್ಣವರ ಮಾತನಾಡಿ ಯುವ ಜನರು ಯಾವುದೇ ಆಸೆ- ಆಮಿಷಗಳಿಗೆ ತುತ್ತಾಗದೇ ಮತ ಚಲಾಯಿಸಬೇಕು ಎಂದು ಅವರು ಕರೆ ನೀಡಿದರು.’ ಮತ್ತೊಬ್ಬ ಜಿಲ್ಲಾ ಚುನಾವಣಾ ರಾಯಭಾರಿ ಎಂದು ಅವರು ಕರೆ ನೀಡಿದರು.’ ಜಿ.ಪಂ.ಉಪ ಕಾರ್ಯದರ್ಶಿ ಹಾಗೂ ಸ್ವೀಪ್ ಸಮಿತಿಯ ಜಿಲ್ಲಾ ನೋಡಲ್ ಅಧಿಕಾರಿ ಸಿ.ಬಿ.ದೇವರಮನಿ, ತಾ.ಪಂ.ಇಒ ಮಾಣಿಕರಾವ್ ಪಾಟೀಲ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಶರಣು ಗೋಗೇರಿ, ವಿವಿಧ ಇಲಾಖೆಯ ಅಧಿಕಾರಿಗಳು, ಶಾಲಾ ಕಾಲೇಜುಗಳ ಪ್ರಾಂಶುಪಾಲರು ಉಪನ್ಯಾಸಕರು ಇತರರು ಇದ್ದರು.
ಮೋದಿಯವರು ಬರುವ ಮೊದಲು ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಎಷ್ಟಿತ್ತು? ಈಗ ಎಷ್ಟಾಗಿದೆ?
ಮೋದಿಯವರು ಪ್ರಧಾನಿಯಾಗಿ ನಾಲಾಯಕ್ ಅಂತ ವಿದ್ಯಾವಂತ ಯುವ ಸಮೂಹ ತೀರ್ಮಾನಿಸಿದೆ. ಇಂಥಾ ನಾಲಾಯಕ್ ಗೆ ಮತ ಹಾಕ್ತಿರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಕೋಲಾರ (ಶಿಡ್ಲಘಟ್ಟ)ದ ರೋಡ್ ಶೋನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಗೆಲುವಿನ ಜನ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತಯಾಚಿಸಿ ಈ ರೀತಿ ಪ್ರಶ್ನಿಸಿದರು. ನಿರುದ್ಯೋಗಿ ಯುವಕ/ಯುವತಿಯರಿಗೆ ಪಕೋಡ ಮಾರಿ ಅನ್ನೋಕೆ ಮೋದಿ ಪ್ರಧಾನಿಯೇ ಆಗಬೇಕಿತ್ತಾ.
ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀನಿ ಅಂತ ಇಡೀ ದೇಶದ ಯುವಕ, ಯುವತಿಯರಿಗೆ ನಂಬಿಸಿದರು. ಮೋದಿ ಮಾತನ್ನು ನಂಬಿ ಯುವ ಸಮೂಹ ಮೋದಿಯವರಿಗೆ ಮತ ಹಾಕಿದ್ರು. ಹೀಗೆ ಮತ ಹಾಕಿದವರೆಲ್ಲಾ ಡಿಗ್ರಿ ಮುಗಿಸಿದ ಮೇಲೆ ಕೆಲ್ಸ ಕೊಡಿ ಎಂದು ಕೇಳಿದರೆ, ‘ಹೋಗಿ ಪಕೋಡ ಮಾರಾಟ ಮಾಡಿ” ಅಂದ್ರು, ಇದು ದೇಶದ ಯುವ ಸಮೂಹಕ್ಕೆ ಮಾಡಿದ ಮಹಾದ್ರೋಹ ಅಲ್ಲವೇ? ಮಹಾನ್ ನಂಬಿಕೆ ದ್ರೋಹ ಅಲ್ಲವೇ? ಪಕೋಡ ಮಾರೋದನ್ನು ಹೇಳಿಕೊಡೋಕೆ ಇವರು ಪ್ರಧಾನಿ ಆಗಬೇಕಿತ್ತಾ? ಎಂದು ಪ್ರಶ್ನಿಸಿದರು.
ಮೋದಿಯವರು ಪ್ರಧಾನಿಯಾಗಿ ನಾಲಾಯಕ್ ಅಂತ ವಿದ್ಯಾವಂತ ಯುವ ಸಮೂಹ ತೀರ್ಮಾನಿಸಿದೆ. ಇಂಥಾ ನಾಲಾಯಕ್ ಗೆ ಮತ ಹಾಕ್ತಿರಾ? ಹತ್ತತ್ತು ವರ್ಷ ಮತ ಹಾಕಿದ್ರಲ್ಲಾ ನಿಮಗೆ, ದೇಶಕ್ಕೆ ಏನಾದ್ರೂ ಸಿಕ್ಕಿತಾ ? ಈ ಹತ್ತು ವರ್ಷದಲ್ಲಿ ಏನೇನೂ ಮೋದಿಯವರು ಬರುವ ಮೊದಲು ಪೆಟ್ರೋಲ್, ಡೀಸೆಲ್, ಗ್ಯಾಸ್, ರಸಗೊಬ್ಬರ, ಬೇಳೆಕಾಳು, ಅಡುಗೆ ಎಣ್ಣೆ ಬೆಲೆ ಎಷ್ಟಿತ್ತು?ಈಗ ಎಷ್ಟಾಗಿದೆ? ನಾವು ನುಡಿದಂತೆ ನಡೆದಿದ್ದೇವೆ. ಪ್ರತಿ ಕುಟುಂಬಗಳ ಜೇಬಿಗೆ ಪ್ರತಿ ತಿಂಗಳು 4 ರಿಂದ 6 ಸಾವಿರ ರೂಪಾಯಿ ಹಾಕುತ್ತಿದ್ದೇವೆ. ನಾವು ನುಡಿದಂತೆ ನಡೆದು ಬಂದು ಓಟು ಕೇಳುತ್ತಿದ್ದೇವೆ. ನಮಗೆ ಮತ ನೀಡಿ. ನಿಮ್ಮ ಮತಕ್ಕೆ ಗೌರವ ಕೊಟ್ಟು ಅಭಿವೃದ್ಧಿಯ ಲಾಭ ನಿಮ್ಮ ಜೇಬಿಗೆ, ನಿಮ್ಮ ಖಾತೆಗೆ ಹಾಕುವ ಕೆಲಸವನ್ನು ನಾವು ಮಾಡ್ತವೆ ಎಂದು ಘೋಷಿಸಿದರು.
ವರ್ಷಕ್ಕೆ ಒಂದೂಕಾಲು ಲಕ್ಷ ಬಂದು ಬೀಳತ್ತೆ ನಿಮಗೆ ಹತ್ತತ್ತು ವರ್ಷ ನಿಮಗೆ ಮೋದಿಯವರಿಂದ ಸಿಕ್ಕಿದ್ದು ರಾಶಿ ರಾಶಿ ಸುಳ್ಳುಗಳು ಮತ್ತು ನಂಬಿಕೆ ದ್ರೋಹ ರೈತರು ಬೆಳೆದ ಬೆಳೆಗಳಿಗೆ ಖಚಿತವಾದ ಬೆಂಬಲ ಬೆಲೆ ಕೊಡುತ್ತೇವೆ ಇಂಥಾ 25 ಗ್ಯಾರಂಟಿಗಳನ್ನು ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆಯವರು ಘೋಷಿಸಿ ಪತ್ರಕ್ಕೆ ಸಹಿ ಹಾಕಿದ್ದಾರೆ. ಈ ಪತ್ರಗಳು ನಿಮಗೆ ಬರುತ್ತವೆ. ಹೀಗಾಗಿ ಬಿಜೆಪಿಯ ಖಾಲಿ ಚೊಂಬಿಗೆ ಮತ ಹಾಕ್ತಿರಾ, ನಿಮ್ಮ ಜೇಬು ತುಂಬಿಸುವ ಮತ್ತು ನಿಮ್ಮ ಬ್ಯಾಂಕ್ ಖಾತೆಗೆ ಹಣ ಹಾಕಿ ನುಡಿದಂತೆ ನಡೆಯುವ ನಮಗೆ, ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕೀರೋ ಎನ್ನುವುದನ್ನು ಯೋಚಿಸಿ ತೀರ್ಮಾನಿಸಿ ಎಂದು ಕರೆ ನೀಡಿದರು.