Breaking
Sat. Dec 21st, 2024
Spread the love

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಪಡಿತರ ಚೀಟಿಯಲ್ಲಿ ತಿದ್ದುಪಡಿ ಅಥವಾ ಸೇರ್ಪಡೆ ಮಾಡಲು ಇಂದು ಕೊನೆಯ ದಿನಾಂಕ ಮುಂಜಾನೆ 10 ರಿಂದ ಸಾಯಂಕಾಲ 5 ವರೆಗೆ. ಗೃಹ ಲಕ್ಷ್ಮಿ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಕುಟುಂಬದ ಯಜಮಾನಿಯ ಸ್ಥಾನ ಬದಲಾಯಿಸುವ ಅವಶ್ಯಕತೆ ಇದ್ದಲ್ಲಿ ಅರ್ಜಿ ಸಲ್ಲಿಸಬಹುದು.

ಯೋಜನೆಗೆ ಇದುವರೆಗೂ ನೋಂದಾಯಿಸದೇ ಇರುವವರು ಯಜಮಾನಿಯ ಬದಲಾವಣೆ ಮಾಡಿಕೊಳ್ಳಬಹುದು. ಯೋಜನೆಯಡಿ ಈಗಾಗಲೇ ನೋಂದಾಯಿಸಿ ಯಜಮಾನಿಯ ಬದಲಾವಣೆಗೆ ಅರ್ಜಿ ಸಲ್ಲಿಸಿದ್ದಲ್ಲಿ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಈ ಅರ್ಜಿ ಇತ್ಯರ್ಥಗೊಳ್ಳುವವರೆಗೂ ಗೃಹಲಕ್ಷ್ಮಿ ಯೋಜನೆಯ ಲಾಭ ತಡೆಹಿಡಿಯಲಾಗುತ್ತದೆ.

ಸ್ಪಿಂಕ್ಲರ್ ಘಟಕಗಳಿಗೆ ಅರ್ಜಿ ಆಹ್ವಾನ

ಕೃಷಿ ಇಲಾಖೆಯಿಂದ ಸೂಕ್ಷ್ಮ ನೀರಾವರಿ ಘಟಕ ಯೋಜನೆಯಡಿ ತುಂತುರು (ಸ್ಪಿಂಕ್ಲ‌ರ್) ನೀರಾವರಿ ಸೌಲಭ್ಯ ಪಡೆಯಲು ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತರು ಹೂವಿನಹಡಗಲಿ, ಹಿರೇಹಡಗಲಿ, ಇಟ್ಟಿಗಿ ರೈತ ಸಂಪರ್ಕ ಕೇಂದ್ರಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಮಹ್ಮದ್ ಆಶ್ರಫ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೂವಿನಹಡಗಲಿ ತಾಲ್ಲೂಕಿನ ಸಿಂಗಟಾಲೂರು ಬ್ಯಾರೇಜ್ ಬಳಿ ತುಂಗಭದ್ರಾ ನದಿಗೆ ಶಾಸಕ ಕೃಷ್ಣನಾಯ್ಕ ಹಾಗೂ ಮಠಾಧೀಶರು ಬಾಗಿನ ಅರ್ಪಿಸಿದರು. ಹೂವಿನಹಡಗಲಿ ತಾಲ್ಲೂಕಿನ ಸಿಂಗಟಾಲೂರು ಬ್ಯಾರೇಜ್ ಬಳಿ ತುಂಗಭದ್ರಾ ನದಿಗೆ ಶಾಸಕ ಕೃಷ್ಣನಾಯ್ಕ ಹಾಗೂ ಮಠಾಧೀಶರು ಬಾಗಿನ ಅರ್ಪಿಸಿದರು. ಇಲ್ಲಿನ ಸಿಂಗಟಾಲೂರು ಏತ ನೀರಾವರಿ ಯೋಜನೆಯ ಬ್ಯಾರೇಜ್ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಶಾಸಕ ಕೃಷ್ಣನಾಯ್ಕ ಅವರು ಬುಧವಾರ ವಿವಿಧ ಮಠಾಧೀಶರ ಸಾನ್ನಿಧ್ಯದಲ್ಲಿ ತುಂಗಭದ್ರೆಗೆ ಬಾಗಿನ ಸಮರ್ಪಿಸಿದರು. ಗಂಗಾಪೂಜೆ ನೆರವೇರಿಸಿದ ಬಳಿಕ ಬ್ಯಾರೇಜ್ ನ ಹಿನ್ನೀರಿಗೆ ಬಾಗಿನ ಅರ್ಪಿಸಿದರು.

ಇದೇ ವೇಳೆ ಮಾಗಳ ಕಾಲುವೆಗೆ ನೀರು ಹರಿಸುವ ಕಾರ್ಯಕ್ಕೆ ಶಾಸಕರು ಚಾಲನೆ ನೀಡಿದರು. ನಂದಿಪುರದ ಮಹೇಶ್ವರ ಸ್ವಾಮೀಜಿ ಗವಿಮಠದ ಹಿರಿಶಾಂತವೀರ ಸ್ವಾಮೀಜಿ ಮಲ್ಲನಕೆರೆ ಮಠದ ಚನ್ನಬಸವ ಸ್ವಾಮೀಜಿ ಹಂಪಸಾಗರದ ಶಿವಲಿಂಗ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಕೊಟ್ಟೂರು ಚಾನುಕೋಟಿ ಮಠದ ಸ್ವಾಮೀಜಿ ಕೊಂಬಳಿ ಚೌಕಿಮಠದ ಗಾಡಿತಾತ ಮೈನಳ್ಳಿಯ ಸಿದ್ದೇಶ್ವರ ಸ್ವಾಮೀಜಿ ಶ್ರೀರಾಮ ದೇವಸ್ಥಾನದ ರಾಮಸ್ವಾಮಿ ರಾಕೇಶಯ್ಯ ಸಾನ್ನಿಧ್ಯ ವಹಿಸಿದ್ದರು. ಬಿಜೆಪಿ ಮಂಡಲ ಅಧ್ಯಕ್ಷ ಹಣ್ಣಿ ಶಶಿಧರ ಮುಖಂಡರಾದ ಎಂ.ಪರಮೇಶ್ವರಪ್ಪ ಎಚ್.ಪೂಜಪ್ಪ ಎನ್‌. ಕೋಟೆಪ್ಪ ಡಾ. ಲಕ್ಷ್ಮಣನಾಯ್ಕ ಕೆ.ಪುತ್ರೇಶ ಶಿವಪುರ ಸುರೇಶ ಕೆ.ಪತ್ರೇಶ ಪ್ರಕಾಶ ಯಲಗಚ್ಚಿನ ವೀರಸಿಂಗ್ ರಾಠೋಡ್ ವಿಶ್ವನಾಥ ಮಂತ್ರೋಡಿ ಸಿಂಗಟಾಲೂರು ಯೋಜನೆಯ ಕಾರ್ಯನಿರ್ವಾಹಕ ಎಂಜಿನಿಯ‌ರ್ ಶಿವಮೂರ್ತಿ ಎಇಇಗಳಾದ ರಾಘವೇಂದ್ರ ಡಿ.ಎನ್.ರಾಜು ಇತರರು ಇದ್ದರು.

ಮೀನುಗಾರಿಕೆ ಇಲಾಖೆಯಿಂದ ಅರ್ಜಿ ಆಹ್ವಾನ

ಮೀನುಗಾರಿಕೆ ಇಲಾಖೆಯಿಂದ 2024- 25ನೇ ಸಾಲಿನ ಜಿಲ್ಲಾ ಪಂಚಾಯತಿ ಯೋಜನೆಗಳಡಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಜುಲೈ 29 ರಿಂದ ಆಗಸ್ಟ್ 12 ರವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕಾಲಾವಕಾಶವಿರುತ್ತದೆ.

ಜಿಲ್ಲಾ ಪಂಚಾಯತ್ ಯೋಜನೆಗಳು

ಒಳನಾಡು ಮೀನುಗಾರಿಕೆ ಅಭಿವೃದ್ಧಿಗೆ ಸಹಾಯ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀನು ಕೃಷಿಕರಿಗೆ 10,000 ರೂ.ಗಳ ವೆಚ್ಚದಲ್ಲಿ ಉಚಿತ ಮೀನುಗಾರಿಕೆ ಕಿಟ್‌ಗಳನ್ನು ವಿತರಿಸುವುದು. ಮೀನು ಮಾರುಕಟ್ಟೆಗಳ ನಿರ್ಮಾಣ ಮತ್ತು ಮೀನು ಮಾರಾಟಕ್ಕೆ ಸಹಾಯ ಮತ್ಸ ವಾಹಿನಿ ಯೋಜನೆಯಡಿ ಐಸ್ ಬಾಕ್ಕೊಂದಿಗೆ ಮೊಪೆಡ್ ಖರೀದಿಸಲು ಸಹಾಯಧನ ನೀಡಲಾಗುತ್ತದೆ.

ಅರ್ಹ ಅರ್ಜಿದಾರರು ಅಗತ್ಯ ದಾಖಲೆಗಳೊಡನೆ ವೆಬ್ https://vijayangara.nic.in/ ಮುಖಾಂತರ ಅಥವಾ ಆಯಾ ತಾಲೂಕಿನ ಮೀನುಗಾರಿಕೆ ಇಲಾಖೆಯ ಕಚೇರಿಯ ಮುಖಾಂತರ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಹೊಸಪೇಟೆ, ಕೂಡ್ಲಿಗಿ, ಹಡಗಲಿ, ಹರಪನಹಳ್ಳಿ ಕಚೇರಿ ಮತ್ತು ಮೀನುಗಾರಿಕೆ ಉಪ ನಿರ್ದೇಶಕರು, ಬಳ್ಳಾರಿ ಕಚೇರಿಗೆ ಸಂಪರ್ಕಿಸಬಹುದೆಂದು ಮೀನುಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

10.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. (ಸಣ್ಣ ಪ್ರಮಾಣದ ಗುಡುಗು ಸಾಧ್ಯತೆಯೂ ಇದೆ). ಉತ್ತರ ಕನ್ನಡ ಬೆಳಿಗ್ಗೆಯಿಂದ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು ಮೋಡದ ವಾತಾವರಣದ ಮುನ್ಸೂಚನೆಯೊಂದಿಗೆ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಗುಡುಗು ಸಾಧ್ಯತೆಯೂ ಇದೆ.

ಮೈಸೂರು, ಚಾಮರಾಜನಗರ (ಅಲ್ಲಲ್ಲಿ ಸಾಮಾನ್ಯ), ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ, ಗದಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಧಾರವಾಡ, ಬೆಳಗಾವಿ, ಹಾವೇರಿ, ಬಾಗಲಕೋಟೆ, ವಿಜಯಪುರ, ಬಳ್ಳಾರಿ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಾಗಲೇ ಮುಂಗಾರು ದುರ್ಬಲಗೊಂಡಿದ್ದು, ಆಗಸ್ಟ್ 16ರ ವರೆಗೆ ದಕ್ಷಿಣ ಒಳನಾಡು ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಕೊರತೆ ಉಂಟಾಗುವ ಲಕ್ಷಣಗಳಿವೆ. ಕರಾವಳಿಯಲ್ಲಿ ಆಗಸ್ಟ್ 12ರ ತನಕ ಹೆಚ್ಚಾಗಿ ಮಧ್ಯಾಹ್ನ ನಂತರ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿದ್ದು, ನಂತರ ಅದೂ ಕಡಿಮೆಯಾಗಬಹುದು. ಮುಂಗಾರು ಇನ್ನು ಸಧ್ಯಕ್ಕೆ ಚೇತರಿಕೆಯ ಲಕ್ಷಣಗಳಿಲ್ಲ.

09.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರಿನ ಪಾವಗಢ, ಚಿತ್ರದುರ್ಗ ಉತ್ತರ, ಬಳ್ಳಾರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಗುಡುಗು ಸಹಿತ ಸಾಧ್ಯತೆ ಇದೆ.

ಉಳಿದ ತುಮಕೂರು ಹಾಗೂ ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ವಿಜಯಪುರ ಜಿಲ್ಲೆಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಮುಂಗಾರು ಈಗಾಗಲೇ ದುರ್ಬಲಗೊಂಡಿದ್ದು ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಕ್ಷೀಣಿಸಿದೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ.

ವಿದೇಶಿ ವಿದ್ಯಾಭ್ಯಾಸಕ್ಕಾಗಿ ಸಾಲ ಸೌಲಭ್ಯ : ಅರ್ಜಿ ಆಹ್ವಾನ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದಿಂದ 2024-25ನೇ ಸಾಲಿನಲ್ಲಿ ವಿದೇಶಿ ವಿದ್ಯಾಭ್ಯಾಸಕ್ಕಾಗಿ ಸಾಲ ಸೌಲಭ್ಯ ಪಡೆಯಲು ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಭೌದ್ಧರು, ಸಿಬ್ಬರು, ಪಾರ್ಸಿಗಳು ಜನಾಂಗದವರಿಂದ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು ಅರ್ಹ ವಿದ್ಯಾರ್ಥಿಗಳು ಆಗಸ್ಟ್ 31 ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು, ಕೋರ್ಸ್ ಪೂರ್ಣಕಾಲಿಕ ಪದವಿ ಮತ್ತು ಸ್ನಾತಕೋತ್ತರ ಪದವಿಯಾಗಿರಬೇಕು, ವಿದ್ಯಾರ್ಥಿಗಳ ವಯಸ್ಸು ಗರಿಷ್ಠ 38 ವರ್ಷ ಮೀರಿರಬಾರದು, ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ ಎಲ್ಲಾ ಮೂಲಗಳಿಂದ 8 ಲಕ್ಷ ರೂಗಳು ಮೀರಿರಬಾರದು.

ಹಿಂದಿನ ವರ್ಷದಲ್ಲಿ ಕನಿಷ್ಠ 60 ರಷ್ಟು ಅಂಕವನ್ನು ಪಡೆದಿರಬೇಕು, ನಿಗಮಕ್ಕೆ ಆಸ್ತಿಯ (ಕಟ್ಟಡ/ಜಮೀನು) ಅಡಮಾನದ ಮೇಲೆ ಮಾತ್ರ ಸಾಲ ಒದಗಿಸಲಾಗುವುದು, ಆಸ್ತಿಯ ಮೌಲ್ಯವು ಸಾಲದ ಮೊತ್ತಕಿಂತ ಕಡಿಮೆ ಇರಬಾರದು. https://kmdconline.karnataka.gov.in/ ವೆಬ್‌ಸೈಟ್ಲ್ಲಿ ಅರ್ಜಿ ಸಲ್ಲಿಸಿ ಅರ್ಜಿಯ ಪ್ರತಿ ಮತ್ತು ಅಗತ್ಯ ದಾಖಲಾತಿಗಳೊಂದಿಗೆ ಆಗಸ್ಟ್ 31 ರೊಳಗೆ ನಿಗಮದ ಕಚೇರಿಗೆ ನೀಡಬೇಕು. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಹೊಸಪೇಟೆಯ ತಾಲೂಕು ಕಚೇರಿಯಲ್ಲಿರುವ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ), ಜಿಲ್ಲಾ ವ್ಯವಸ್ಥಾಪಕರ (ಪ್ರ), ಕಚೇರಿಗೆ ಅಥವಾ ದೂ.ಸಂ: 08392-294370 ಗೆ ಸಂಪರ್ಕಿಸಿ ಎಂದು ಪ್ರಕಟಣೆ ತಿಳಿಸಿದೆ.

ನವೋದಯ ವಿದ್ಯಾಲಯ ; 6ನೇ ತರಗತಿ ಪ್ರವೇಶಕ್ಕೆ ಅರ್ಜಿ

ರಾಯಚೂರು : ಮುದಗಲ್ ಜವಾಹರ್ ನವೋದಯ ವಿದ್ಯಾಲಯದಲ್ಲಿ 6ನೇ ತರಗತಿಯ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ನಿಗದಿತ ವ್ಯಾಸಂಗ ಪ್ರಮಾಣ ಪತ್ರ, ಭಾವಚಿತ್ರ, ಪೋಷಕರ ಸಹಿ, ಅಭ್ಯರ್ಥಿಯ ಸಹಿ, ಆಧಾರ್ ವಿವರಗಳು ಹಾಗೂ ತಹಶೀಲ್ದಾರ್‌ರಿಂದ ಪಡೆದ ನಿವಾಸ ಪ್ರಮಾಣ ಪತ್ರಗಳೊಂದಿಗೆ ನವೋದಯ ವಿದ್ಯಾಲಯ www.navodaya.gov.in ನೀಡಿ, ಸೆಪ್ಟೆಂಬರ್ 16 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂರವಾಣಿ ಸಂಖ್ಯೆ. 9448571580, 7204109046 , 9703473495 ಸಂಪರ್ಕಿಸಬೇಕು ಎಂದು ಜವಾಹರ್ ನವೋದಯ ವಿದ್ಯಾಲಯದ ಪ್ರಾಚಾರ್ಯ ತಿಳಿಸಿದ್ದಾರೆ.

ಪ್ರವಾಹದಿಂದ ಜೀವಹಾನಿ ಆಗದಂತೆ ಮುನ್ನೆಚ್ಚರಿಕೆ ವಹಿಸಿ

ಜಿಲ್ಲೆಯ ಎಲ್ಲ ತಹಶೀಲ್ದಾರರು ತಮ್ಮ ವ್ಯಾಪ್ತಿಯ ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಿ, ಊಟೋಪಹಾರ, ಔಷಧ ಸಾಮಗ್ರಿಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಪ್ರವಾಹದಿಂದ ಜನರು ಮತ್ತು ಜಾನುವಾರುಗಳ ಪ್ರಾಣ ಹಾನಿಯಾಗದಂತೆ ಮುನ್ನೆಚ್ಚರಿಕೆ ಗಮನಕ್ಕೆ ವಹಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿಪುಲ್ ಬನ್ಸಾಲ್ ಸೂಚಿಸಿದರು.

ಅತಿವೃಷ್ಟಿಯಿಂದ ಉಂಟಾದ ಹಾನಿ, ಪ್ರವಾಹ ನಿರ್ವಹಣೆ ಸಂಬಂಧ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಆಗಸ್ಟ್‌ನಲ್ಲಿ ಮಳೆ ಪ್ರಮಾಣ ಹೆಚ್ಚುವ ಸಾಧ್ಯತೆ ಇದ್ದು, ಎಲ್ಲ ಕಾಳಜಿ ಕೇಂದ್ರಗಳಲ್ಲಿ ಆಹಾರ, ಔಷಧ ಮತ್ತು ನೀರಿನ ವ್ಯವಸ್ಥೆ ಮಾಡಿಕೊಳ್ಳಬೇಕು. ಜಾನುವಾರು ಶಿಬಿರಗಳಲ್ಲಿ ಬೇಡಿಕೆಯಂತೆ ಮೇವಿನ ದಾಸ್ತಾನು ಇರಿಸಿಕೊಳ್ಳಬೇಕು. 2019ರ ಪ್ರವಾಹ ಪರಿಸ್ಥಿತಿ ಗಮನದಲ್ಲಿ ಇಟ್ಟುಕೊಂಡು, ಈ ಬಾರಿ ಯಾವ ಸಮಸ್ಯೆ ತಲೆದೋರದಂತೆ ಸಿದ್ಧತೆ ಮಾಡಿಕೊಳ್ಳಬೇಕು’ ಎಂದರು. ಜಲಾಶಯಗಳಿಂದ ನೀರು ಬಿಡುವಾಗ ಬ್ಯಾರೇಜ್‌ಗಳ ನಿರ್ವಹಣೆಗಾಗಿ ಎಲ್ಲ ಇಲಾಖೆಗಳು ಸಮನ್ವಯದೊಂದಿಗೆ ಕೆಲಸ ಮಾಡಬೇಕು.

ನದಿಗಳು ಹರಿಯುತ್ತಿವ ಕಾರಣ, ಜನರ ಪ್ರಾಣ ರಕ್ಷಣೆಗೆ ಒತ್ತು ನೀಡಬೇಕು’ ಎಂದು ಸೂಚಿಸಿದರು. ವಿಪತ್ತು ನಿರ್ವಹಣೆಗಾಗಿ ತಹಶೀಲ್ದಾರರ ಖಾತೆಯಲ್ಲಿ ಸಾಕಷ್ಟು ಹಣವಿದೆ. ಒಂದುವೇಳೆ ಹಣದ ಕೊರತೆಯಾದರೆ, ತಕ್ಷಣವೇ ಹಿರಿಯ ಅಧಿಕಾರಿಗಳ ತರಬೇಕು’ ಎಂದೂ ತಿಳಿಸಿದರು. ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ‘ಮಹಾರಾಷ್ಟ್ರ ಹಾಗೂ ಕರ್ನಾಟಕ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳ ಸಮನ್ವಯದೊಂದಿಗೆ ಜಿಲ್ಲೆಯ ಜಲಾಶಯಗಳ ನೀರಿನ ಸಂಗ್ರಹ ಮಟ್ಟವನ್ನು ಸಮರ್ಪಕವಾಗಿ ನಿರ್ವಹಿಸಲಾಗುತ್ತಿದೆ. ಕೃಷ್ಣಾ. ಘಟಪ್ರಭಾ, ಮಲಪ್ರಭಾ ಸೇರಿದಂತೆ ಎಲ್ಲ ನದಿಪಾತ್ರದ ಗ್ರಾಮಗಳ ಜನರ ರಕ್ಷಣೆ ಮತ್ತು ಸ್ಥಳಾಂತರಕ್ಕೆ ಕ್ರಮ ವಹಿಸಲಾಗಿದೆ’ ಎಂದರು. ಜಿಲ್ಲೆಯಲ್ಲಿ 427 ಕಾಳಜಿ ಕೇಂದ್ರ ತೆರೆಯಲು ತಯಾರಿ ಮಾಡಿಕೊಂಡಿದ್ದೇವೆ.

ಈ ಪೈಕಿ ಈವರೆಗೆ ಅಗತ್ಯತೆ ಆಧರಿಸಿ. 46 ಕೇಂದ್ರ ಆರಂಭಿಸಿದ್ದೇವೆ. ಅತಿವೃಷ್ಟಿಯಿಂದ ಸಂಕಷ್ಟಕ್ಕೆ 3,684 ಕುಟುಂಬಗಳ 10,304 ಜನರಿಗೆ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಕಲ್ಪಿಸಿದ್ದೇವೆ’ ಎಂದರು. ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕಅಪಾಯದ ಮಟ್ಟ ಮೀರಿ ಆರಣ್ಯದಲ್ಲಿ ಕೆಲವು ಪ್ರದೇಶ ಹೊರತುಪಡಿಸಿದರೆ, ಜಿಲ್ಲೆಯ ಯಾವುದೇ ಸ್ಥಳಕ್ಕೂ ಆಂಬುಲೆನ್ಸ್, ವೈದ್ಯಕೀಯ ಸೇವೆ ಒದಗಿಸಲು ಆರೋಗ್ಯ ಇಲಾಖೆ ಸನ್ನದ್ಧವಾಗಿದೆ’ ಎಂದು ಹೇಳಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ‘ಮುಳುಗಡೆಯಾದ ಕೆಳಹಂತದ ಸೇತುವೆಗಳ ಮೇಲೆ ಸಂಚಾರ ತಡೆಯಲು ಬ್ಯಾರಿಕೇಡ್ ಅಳವಡಿಸಿ, ಸಿಬ್ಬಂದಿ ನಿಯೋಜಿಸಲಾಗಿದೆ.

ಕೆಲವು ಸೇತುವೆ ಈಗ ಸಂಚಾರಕ್ಕೆ ಮುಕ್ತವಾಗಿವೆ’ ಎಂದರು. ನಗರ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್ ಮಾರ್ಬನ್ಯಾಂಗ್‌, ನಗರ ಪೊಲೀಸ್ ಉಪ ಆಯುಕ್ತ ರೋಹನ್ ಜಗದೀಶ್, ಪ್ರೊಬೇಷನರಿ ಐಎಎಸ್ ಅಧಿಕಾರಿ ದಿನೇಶಕುಮಾರ್ ಮೀನಾ ಇತರರಿದ್ದರು. ಎಲ್ಲ ತಹಶೀಲ್ದಾರರು ವಿಡಿಯೊ ಸಂವಾದದ ಮೂಲಕ ಹಾಜರಾದರು. ಮಾಡಿ ಹಾನಿ ಕುರಿತು ಸರಿಯಾಗಿ ರಸ್ತೆಗಳ ಹಾನಿ ಕುರಿತು ಸಮೀಕ್ಷೆ ನಡೆಸಬೇಕು. ಯಾವುದೇ ಅಧಿಕಾರಿ ರಜೆಗೆ ತೆರಳದೆ ಕೇಂದ್ರ ಸ್ಥಾನದಲ್ಲಿ ಇದ್ದುಕೊಂಡು ಜಾಗರೂಕತೆಯಿಂದ ಕೆಲಸ ಮಾಡಬೇಕು’ ಎಂದು ವಿಪುಲ್ ಜಾಗರೂಕತೆಯಿಂದ ಕೆಲಸ ಕೃಷಿ ತೋಟಗಾರಿಕೆ ಬೆಳೆಗಳ ಪರಿಶೀಲಿಸಬೇಕು.

Related Post

Leave a Reply

Your email address will not be published. Required fields are marked *