ಅತ್ಮೀಯ ರೈತರೇ,
2023-24 ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಸಣ್ಣ ರೈತರಿಗೆ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಒದಗಿಸಲು ಅರ್ಜಿಗಳನ್ನು ಆನ್‌ಲೈನ್ ಮೂಲಕ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಸಲ್ಲಿಸಬಯಸುವ ಫಲಾಪೇಕ್ಷಿಗಳು ದಿನಾಂಕ:
02-03-2023ರವರೆಗೆ ಸೇವಾ ಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾಕೇಂದ್ರಗಳಲ್ಲಿ ಆನ್‌ಲೈನ್‌ನಲ್ಲಿ ಸಲ್ಲಿಸಬಹುದಾಗಿರುತ್ತದೆ.
ಅರ್ಹ ನಿರುದ್ಯೋಗಿ ಅಭ್ಯರ್ಥಿಗಳು ವಿವಿಧ ಆರ್ಥಿಕ ಚಟುವಟಿಕೆಗಳನ್ನು ಕೈಗೊಂಡು ಆದಾಯ ಗಳಿಸಲು ಸ್ವಯಂ ಉದ್ಯೋಗ ಯೋಜನೆಗಳಾದ ನೇರಸಾಲ ಯೋಜನೆ , ಉದ್ಯಮ ಶೀಲತಾ ಅಭಿವೃದ್ಧಿಯೋಜನೆ , ಮೈಕ್ರೋ ಯೋಜನೆ , ಭೂ ಒಡೆತನ ಯೋಜನೆ ಹಾಗೂ ಗಂಗಾ ಕ್ರೆಡಿಟ್ ಪ್ರೇರಣಾ ಕಲ್ಯಾಣ ಯೋಜನೆಯಾಗಿದೆ.
ಇದನ್ನೂ ಓದಿ :- ಈ ಕೆಲಸ ಮಾಡಿದರೆ 7 ದಿನಗಳಲ್ಲಿ ಆಸ್ತಿ ನಿಮ್ಮ ಹೆಸರಿಗೆ ಆಗುತ್ತೆ
ಈ ಯೋಜನೆಯ ಸೌಲಭ್ಯವನ್ನ ಪಡೆಯಲು ಅರ್ಜಿದಾರರು ಈ ಕೆಳಕಂಡ ಅರ್ಹತೆಗಳನ್ನು ಹೊಂದಿರಬೇಕು.
- ಸಣ್ಣ ಮತ್ತು ಅತಿ ಸಣ್ಣ ರೈತರು ಹಾಲಿ ಜಮೀನುಗಳು ಖುಷ್ಠಿಯಾಗಿದ್ದು ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿರಬಾರದು.
- ಭಾರತದ ಮತ್ತು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಳಾಗಿರಬೇಕು.
- ಅರ್ಜಿದಾರರ ವಯಸ್ಸು 18 ರಿಂದ 60 ವರ್ಷದ ಒಳಗಿರಬೇಕು.
- ಅರ್ಜಿದಾರರ ಕುಟುಂಬ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. 98,000/- ಹಾಗೂ ಪಟ್ಟಣ ಪ್ರದೇಶದವರಿಗೆ ರೂ. 1,20,000/-ಗಳ ಒಳಗಿರಬೇಕು.
- ಅರ್ಜಿದಾರರು ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಕನಿಷ್ಠ 02 ಎಕರೆ ಜಮೀನು ಹೊಂದಿರಬೇಕು, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 01 ಎಕರೆ ಜಮೀನು ಹೊಂದಿರಬೇಕು.
- ವೈಯಕ್ತಿಕ ಕೊಳವೆ ಬಾವಿ ಯೋಜನೆಯಲ್ಲಿ ಘಟಕ ವೆಚ್ಚ ರೂ. 2.50 ಲಕ್ಷಗಳು, ಇದರಲ್ಲಿ ರೂ. 2.00 ಲಕ್ಷ ಸಹಾಯಧನ ಹಾಗೂ ರೂ. 50,000/- ನಿಗಮದಿಂದ ಶೇ.4ರ ಬಡ್ಡಿದರದಲ್ಲಿ ನೀಡುವ ಸಾಲದ ಮೊತ್ತ ಒಳಗೊಂಡಿದೆ.
- ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಿಗೆ ವೈಯಕ್ತಿಕ ಕೊಳವೆ ಬಾವಿ ಘಟಕ ವೆಚ್ಚ ರೂ. 4.00ಲಕ್ಷಗಳು ಇದರಲ್ಲಿ ರೂ. 3.50ಲಕ್ಷ ಸಹಾಯಧನ ಹಾಗೂ ರೂ. 50,000/ ನಿಗಮದಿಂದ ಶೇ. 4ರ ಬಡ್ಡಿದರದಲ್ಲಿ ನೀಡುವ ಸಾಲದ ಮೊತ್ತ ಒಳಗೊಂಡಿದೆ.
- ರೈತರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್‌ನಲ್ಲಿರುವಂತೆ ರೈತರ ಹೆಸರು, ಬ್ಯಾಂಕ್ ಖಾತೆಯ ಪುಸ್ತಕದಲ್ಲಿಯೂ ಇದ್ದು, ಇತರೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರದಲ್ಲಿಯೂ ಆಧಾರ್ ಕಾರ್ಡ್‌ನಲ್ಲಿರುವಂತೆ ಹೆಸರು ಹೊಂದಾಣಿಕೆಯಾಗಬೇಕು.
9.ಬಹುಮುಖ್ಯವಾದ ವಿಚಾರವೇನೆಂದರೆ ಈ ಹಿಂದೆ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.
ಇದನ್ನೂ ಓದಿ :- ಮನೆ ಕಟ್ಟಲು ಸಿಕ್ಕಿತು ಸಹಾಯಧನ
ಕೇವಲ ಆಧಾರ್ ಕಾರ್ಡ್ ಮತ್ತು ವೋಟಿಂಗ್ ಕಾರ್ಡ್ ಇದ್ದರೆ ಸಾಕು ನಿಮಗೆ ಸಿಗುತ್ತೆ 1.75ಲಕ್ಷ ರೂಪಾಯಿ