Breaking
Wed. Dec 18th, 2024

ನರೇಗಾ ಕಾರ್ಮಿಕರಿಗೆ ಜೂನ್ 22 ರವರೆಗೆ ಗ್ರಾಮ ಆರೋಗ್ಯ ತಪಾಸಣೆ

By mveeresh277 May25,2023 ##narega
Spread the love

ಗ್ರಾಮೀಣ ಜನರ ಅರೋಗ್ಯ ಸಮಸ್ಯೆಗಳ ನಿವಾರಣೆಗೆ ಗ್ರಾಮ ಅರೋಗ್ಯ ಅಭಿಯಾನ ಹಮ್ಮಿ ಕೊಳ್ಳಲಾಗಿದ್ದು, ನರೇಗಾ ಕೂಲಿಕಾ ರರು ಇದರ ಸದುಪಯೋಗ ಪಡೆದು ಕೊಳ್ಳಬೇಕು ಮುದ್ದೇಬಿಹಾಳ ತಾಲ್ಲೂಕು ಪಂಚಾಯ್ತಿ ನರೇಗಾ ಸಹಾಯಕ ನಿರ್ದೇಶಕ ಬಿ.ವೈ. ತಾಳಿಕೋಟಿ ಹೇಳಿದರು. ಮುದ್ದೇಬಿಹಾಳ ತಾಲ್ಲೂಕಿನ ಬಸರಕೋಡ ಗ್ರಾಮದ ಕೆರೆ ಪಕ್ಕದಲ್ಲಿ ನಡೆಯುತ್ತಿರುವ ನರೇಗಾ ಕಾಮಗಾರಿ ಸ್ಥಳದಲ್ಲಿ ಕರ್ನಾಟಕ ಅರೋಗ್ಯ ಸಂವರ್ಧನಾ ಸಂಸ್ಥೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಗ್ರಾಮ ಆರೋಗ್ಯ ಅಭಿಯಾನದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.

ಗ್ರಾಮೀಣರ ಹಾಗೂ ನರೇಗಾ ಕೂಲಿಕಾರರ ಆರೋಗ್ಯ ಸುಧಾರಣೆ ಜೊತೆಗೆ ಗ್ರಾಮದ ಆರೋಗ್ಯ ಸದೃಢಗೊಳ್ಳಬೇಕು ಉದ್ದೇಶದೊಂದಿಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಮೇ 22 ರಿಂದ ಜೂನ್ 22 ವರೆಗೆ ಗ್ರಾಮ ಆರೋಗ್ಯ ಅಭಿಯಾನ ಹಮ್ಮಿಕೊಂಡಿದೆ. ನರೇಗಾ ಯೋಜನೆಯಡಿ ನಡೆಯುತ್ತಿರುವ ಸಮುದಾಯ ಕಾಮಗಾರಿ ಸ್ಥಳದಲ್ಲಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ನರೇಗಾ ಕೂಲಿಕಾರರಿಗೆ ಉತ್ತಮ ಆರೋಗ್ಯ ಕಲ್ಪಿಸುವ ನಿಟ್ಟಿನಲ್ಲಿ ಕಾಮಗಾರಿ ಸ್ಥಳದಲ್ಲಿಯೇ ಬಿಪಿ, ಶುಗರ್, ಮಧುಮೇಹ, ಅತಿ ರಕ್ತದೊತ್ತಡದಂತಹ ಪ್ರಾಥಮಿಕ ಅಸಾಂಕ್ರಮಿಕ ಗುಣಲಕ್ಷಣಗಳನ್ನು ಪತ್ತೆ ಹಚ್ಚಿ ಸೂಕ್ತ ಸಮಾಲೋಚನೆ ನೀಡಲಾಗುವುದು ಎಂದು ತಿಳಿಸಿದರು.

ಬಬಲೇಶ್ವರ ತಾಲ್ಲೂಕಿನ ನಿಡೋಣಿ ಗ್ರಾಮ ಪಂಚಾಯಿತಿ ಹಾಗೂ ಕರ್ನಾಟಕ ಆರೋಗ್ಯ ಸಂವರ್ಧನಾ ಸಂಸ್ಥೆ ಸಹಯೋಗದೊಂದಿಗೆ ದಾಶ್ಯಾಳ ಗ್ರಾಮದ ನರೇಗಾ ಕೂಲಿಕಾರ್ಮಿಕರಿಗೆ ಆರೋಗ್ಯ ತಪಾಸಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ತಾಲ್ಲೂಕು ಐಇಸಿ ಸಂಯೋಜಕ ಶಾಂತಪ್ಪ ಇಂಡಿ ಮಾತನಾಡಿ, ಬಬಲೇಶ್ವರ ತಾಲ್ಲೂಕು ವ್ಯಾಪ್ತಿಯ 15 ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜೂನ್ 22ರ ವರೆಗೆ ಗ್ರಾಮ ಆರೋಗ್ಯ ಅಭಿಯಾನ ಏರ್ಪಡಿಸಲಾಗಿದೆ. ನರೇಗಾ ಕೂಲಿಕಾರ್ಮಿಕರಿಗೆ ಸ್ಥಳದಲ್ಲಿಯೇ ಆರೋಗ್ಯ ತಪಾಸಣೆ ಮಾಡುವ ಉದ್ದೇಶದಿಂದ ಅಭಿಯಾನ ಪ್ರಾರಂಭಿಸ ಲಾಗಿದೆ. ಕಾರ್ಮಿಕರು ಇದರ ಪ್ರಯೋಜನ ಪಡೆಯಬೇಕು ಎಂದರು.

ನಿಡೋಣಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಕಲ್ಲಪ್ಪ ಗೆಣ್ಣೂರ, ದಾಶ್ಯಾಳ, ರೇಣುಕಾ ಬೀಳೂರ, ಶಿವಲಿಂಗಪ್ಪ ಹರಿಜನ, ಶಾರದಾ ಬಿರಾದಾರ ಇದ್ದರು. ಆರೋಗ್ಯ ಸಿಬ್ಬಂದಿ ನರೇಗಾ ಕಾಮಗಾರಿ ಸ್ಥಳದಲ್ಲಿ ಕೆಲಸ ನಿರ್ವಹಿಸಿದ 120ಕ್ಕೂ ಹೆಚ್ಚು ಕೂಲಿಕಾರರ ಆರೋಗ್ಯ ತಪಾಸಣೆ ಮಾಡಿದರು.ಗ್ರಾಮ ಅಧ್ಯಕ್ಷೆ ಮಲ್ಲವ್ವ ಚಲವಾದಿ, ನರೇಗಾ ಜಿಲ್ಲಾ ಐಇಸಿ ಸಂಯೋಜಕ ಕಲ್ಲಪ್ಪ ನಂದರಗಿ, ಕೆ.ಎಸ್.ಪಿ.ಟಿ ಜಿಲ್ಲಾ ಸಂಯೋಜಕರಾದ ಡಿ.ಎಚ್‌.ನದಾಫ್, ಸಮುದಾಯ ಆರೋಗ್ಯ ಅಧಿಕಾರಿಗಳಾದ ಅಶ್ವಿನಿ ಚಲವಾದಿ ತಿಳಿಸಿದ್ದಾರೆ.

ಇದನ್ನೂ ಓದಿ :- ರಾಜ್ಯದಲ್ಲಿ ಮುಂದಿನ ಐದು ದಿನ ಈ ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ ಮೇ 20 ರಿಂದ 24 ರವರೆಗೆ ಹಗುರದಿಂದ ಕೂಡಿದ ಸಾಧಾರಣ ಮಳೆ ಸುರಿಯಲಿದೆ

ಇದನ್ನೂ ಓದಿ :- 2000 ರೂಪಾಯಿ ನೋಟು ಬಂದ್ ಮಾಡಿದ ಕೇಂದ್ರ ಸರ್ಕಾರ ನಿಮ್ಮ ಹಣ ಬದಲಾಯಿಸಿ ಕೊಳ್ಳಲು ಯಾವಾಗ ಕೊನೆಯ ದಿನಾಂಕ ?

ಇದನ್ನೂ ಓದಿ :- ಮಹಿಳಯರಿಗಾಗಿ ಉಚಿತ ಬಸ್ ಪ್ರಯಾಣ,ಯುವಕರಿಗೆ 2000 ರೂಪಾಯಿ ಹಣ ಜಮಾ ಯಾರೆಲ್ಲ ಅರ್ಹರು ಎಂದು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಚೆಕ್ ಮಾಡಿ

Related Post

Leave a Reply

Your email address will not be published. Required fields are marked *