ಆತ್ಮೀಯ ರೈತ ಬಾಂಧವರೇ,
ರಾಜ್ಯ ಸರ್ಕಾರವು ಇಲ್ಲಿಯವರೆಗೆ ಯಾವ ಯಾವ ರೈತರ ಖಾತೆಗೆ ನೇರವಾಗಿ ಬೆಳೆಹಾನಿ ಪರಿಹಾರದ ಹಣ ಜಮಾ ಮಾಡಿದೆ ಎಂಬ ಪಟ್ಟಿಯನ್ನು ಇದೀಗ ಬಿಡುಗಡೆ ಮಾಡಿದ್ದಾರೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಇಲ್ಲವಾ ಎಂಬುದನ್ನು ಚೆಕ್ ಮಾಡುವುದು ಹೇಗೆ ಎಂದು ಒಂದೇ ನಿಮಿಷದಲ್ಲಿ ನಿಮ್ಮ ಮೊಬೈಲ್ ನಲ್ಲಿಯೇ ತಿಳಿಯಿರಿ. ಹಾಗೆಯೇ ಒಂದು ವೇಳೆ ನಿಮಗೆ ಹಣ ಜಮಾ ಆಗದೇ ಇದ್ದರೆ ನೀವೇನು ಮಾಡಬೇಕು ಮಾಡಬೇಕು ಎಂದು ಈ ಕೆಳಗೆ ನೋಡಿರಿ.
ಹಂತ 1:- ಮೊದಲಿಗೆ ಸರ್ಕಾರದ ಅಧಿಕೃತ ವೆಬ್ಸೈಟ್ ಲಿಂಕ್ ಅನ್ನು ತೆರಿಯಿರಿ. ಸರ್ಕಾರ ನೀಡಿರುವ ಈ ಕೆಳಗಿನ ಲಿಂಕ್ ಅನ್ನು ಪ್ರೆಸ್ ಮಾಡಿ
https://parihara.karnataka.gov.in/service87/
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ಕೆಳಗೆ ತೋರಿಸಿದಂತೆ ವರ್ಷ, ಋತು,ವಿಪತ್ತಿನ ವಿಧವನ್ನು ಆಯ್ಕೆ ಮಾಡಿ, ನಂತರ ಕೆಳಗೆ ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ, Get Report ಮೇಲೆ ಕ್ಲಿಕ್ ಮಾಡಿ.
ಹಂತ 3- ನಂತರ ನಿಮಗೆ ಕೆಳಗೆ ತೋರಿಸಿದಂತೆ ಪಟ್ಟಿ ಡೌನ್ಫೋಡ್ ಆಗಿದ್ದು ಕಾಣುತ್ತದೆ. ಅಲ್ಲಿ ನಿಮ್ಮ ಗ್ರಾಮದಲ್ಲಿ ಇಲ್ಲಿಯವರೆಗೆ ಯಾವ ಯಾವ ರೈತರಿಗೆ ಬರ ಪರಿಹಾರ ಹಣ ಜಮಾ ಆಗಿದೆ ಅವರ ಹೆಸರು ಅರ್ಹ ಮತ್ತು ಅನರ್ಹ ಪಟ್ಟಿಯಲ್ಲಿ ತೋರಿಸಲು ಶುರು ಮಾಡುತ್ತಿದ್ದು ನೀವು ನಿಮ್ಮ ಹೆಸರನ್ನು ಪಟ್ಟಿಯಲ್ಲಿ ಪರಿಶೀಲಿಸಬಹುದು.
ಯುವನಿಧಿ ಫಲಾನುಭವಿಗಳು ತಮ್ಮ ಅರ್ಜಿ ಸ್ಥಿತಿ ಪರಿಶೀಲಿಸಿಕೊಳ್ಳಲು ಸೂಚನೆ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಲ್ಲಿ ಒಂದಾದ ಯವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾಗಿದ್ದು, ಪದವಿ/ಡಿಪ್ಲೋಮಾ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿನಗಳು ಪೂರೈಸಿದ ಅಭ್ಯರ್ಥಿಗಳಿಗೆ ಜನವರಿ-2024 ರಿಂದ ನೇರ ನಗದು ವರ್ಗಾವಣೆ ಮಾಡಲಾಗುತ್ತಿದೆ. ಪ್ರತಿ ತಿಂಗಳಲ್ಲಿ ಅಭ್ಯರ್ಥಿಯು (ತಾನು) ನಿರುದ್ಯೋಗಿ, ಸ್ವಯಂ ಉದ್ಯೋಗವಿಲ್ಲವೆಂದು ‘ಸ್ವಯಂ ಘೋಷಣೆ’ ಮಾಡಬೇಕಾಗಿರುತ್ತದೆ. ಸ್ವಯಂ ಘೋಷಣೆ ಮಾಡದೇ ಇರುವ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆಯಾಗುವುದಿಲ್ಲ.
ಫಲಿತಾಂಶದ ನಂತರ ನಿರುದ್ಯೋಗಿ 180 ದಿನಗಳು ಪೂರ್ಣಗೊಂಡ ನಂತರವು ಯಾವುದೇ ನಗದು ಪಡೆಯದೆ ಹೋದ ಅಭ್ಯರ್ಥಿಗಳು (http://sevasindhugs.karnataka.gov.in) ನಲ್ಲಿ ತಮ್ಮ ಅರ್ಜಿಯ ಸ್ಥಿತಿಯನ್ನು ಪರಿಶೀಲಿಸಿ, ತಮ್ಮ ಅರ್ಜಿಯು ಯಾವ ಕಚೇರಿಯಲ್ಲಿ ಪರಿಶೀಲನೆಗಾಗಿ ಬಾಕಿ ಇದೆ ಎಂದು ತಿಳಿದುಕೊಂಡು ಆ ಕಚೇರಿಗಳಿಗೆ ತಮ್ಮ ಶೈಕ್ಷಣಿಕ ಮೂಲ ಹಾಗೂ ಒಂದು ಪ್ರತಿಯ ದಾಖಲಾತಿಗಳನ್ನು ಭೌತಿಕವಾಗಿ ತೆಗೆದುಕೊಂಡು ಹೋಗಿ ಪರಿಶೀಲನೆ ಮಾಡಿಕೊಳ್ಳತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ 08352-250383 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ವಿಜಯಪುರ ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜು.26ರಂದು ವಿವಿಧ ಹುದ್ದೆಗಳ ನೇಮಕಾತಿಗೆ ಉದ್ಯೋಗ ಮೇಳ
ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವಿಜಯಪುರ ಹಾಗೂ ಮಮದಾಪುರ ಸರಕಾರಿ ಪ್ರಥಮ ದರ್ಜೆ ಕಾಲೇಜ್ ಇವರ ಸಹಯೋಗದಲ್ಲಿ ಬೆಂಗಳೂರಿನ ಪ್ರತಿಷ್ಠಿತ ಕಂಪನಿಗಳು ಹಾಗೂ ಸ್ಥಳೀಯ ಖಾಸಗಿ ಕಂಪನಿಗಳಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಜು.26ರಂದು ಬೆಳಿಗ್ಗೆ 10 ಗಂಟೆಗೆ ಬಬಲೇಶ್ವರ ತಾಲೂಕಿನ ಮಮದಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಆವರಣದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಉದ್ಯೋಗ ಮೇಳದಲ್ಲಿ SSLC, ಡಿಪ್ಲೋಮಾ, ಐಟಿಐ, ಡಿ.ಇಡಿ, ಬಿ.ಇಡಿ ಹಾಗೂ ಯಾವುದೇ ಪದವಿ ಪಾಸಾದಂತಹ 35 ವರ್ಷದೊಳಗಿನ ಆಸಕ್ತ ಅಭ್ಯರ್ಥಿಗಳು ಬಯೋಡೆಟಾ ಆಧಾರ ಪ್ರತಿಗಳ 2 ಸೆಟ್ ಝರಾಕ್ಸ್ ಪ್ರತಿಗಳೊಂದಿಗೆ ಭಾಗವಹಿಸಬಹುದಾಗಿದೆ. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಮೊ: 8748991787, 9945000793 ಸಂಖ್ಯೆಗೆ ಸಂಪರ್ಕಿಸುವಂತೆ ಕಾಲೇಜ್‌ನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ
ವಿಜಯಪುರ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲಿಕರಣ ಇಲಾಖೆಯ 13 ಫಲಾನುಭವಿ ಆಧಾರಿತ ಯೋಜನೆಗಳಡಿ ಸಹಾಯ ಸೌಲಭ್ಯ ಪಡೆಯಲು ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
13 ಫಲಾನುಭವಿ ಆಧಾರಿತ ಯೋಜನೆಗಳನ್ನು ಸೇವಾಸಿಂಧು.
ಗ್ರಾಮ ಓನ್, ಕರ್ನಾಟಕ ಓನ್, ಬೆಂಗಳೂರು ಓನ್, ಸಿಟಿಜೆನ್ಸ್ ಪೋರ್ಟಲ್ ಆನ್‌ಲೈನ್ ತಂತ್ರಾಂಶದಡಿ ಅಳವಡಿಸಲಾಗಿದ್ದು, ಪ್ರತಿಭಾ
ವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಯೋಜನೆ. ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಶಿಶುಪಾಲನಾ ಭತ್ಯೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ ಟಾಪ್, ನಿರುದ್ಯೋಗ ಭತ್ಯೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ. ಆಧಾರ ಯೋಜನೆ, ಸಾಧನ ಸಲಕರಣೆಗಳ ಯೋಜನೆ, ಮರಣ ಪರಿಹಾರ ನಿಧಿ, ಶ್ರವಣದೋಷವುಳ್ಳ ವ್ಯಕ್ತಿಗಳ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ. ಸಾಧನೆ ಯೋಜನೆ, ದೃಷ್ಟಿದೋಷ ಹೊಂದಿರುವ ವಿಕಲಚೇತನರಿಗೆ ಬೈಲ್ ಕಿಟ್ ಯೋಜನೆಯಡಿ ಸೌಲಭ್ಯ ಪಡೆದುಕೊಳ್ಳಲು ಆನ್ ಲೈನ್ ಮೂಲಕ sevasindhu.karnataka.gov.in/sevasindhu/DepartmentServiceskannada ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ವಿವಿಧೋದ್ದೇಶ ಪುನರ್‌ವಸತಿ ಕಾರ್ಯಕರ್ತರಾದ ವಿಜಯಪುರ ತಾಲೂಕಿನ ರವಿ ರಾಠೋಡ (ಮೊ:9035553337), ಸಿಂದಗಿಯ ಮುತ್ತುರಾಜ ಸಾತಿಹಾಳ (ಮೊ:9980019635), ಬಸವನ ಬಾಗೇವಾಡಿಯ ಎಸ್.ಡಿ.ಬಿರಾದಾರ (ಮೊ:8722135660), ಇಂಡಿಯ ಪರಶುರಾಮ ಬೋಸಲೆ (ಮೊ:9972441464) ಸಂಪರ್ಕಿಸಬಹುದಾಗಿದೆ.
ನರೇಗಾ ಸಹಾಯದಿಂದ ಲಕ್ಷ ಲೆಕ್ಕದ ಫಸಲು ಬೆಳೆದ ರೈತ
ಮುಂಡರಗಿ ತಾಲೂಕಿನ ಹಾರೋಗೇರಿ ಗ್ರಾಮದ ರೈತ ಮೈಲಾರೆಪ್ಪ ಚೋಳಮ್ಮನವರ ತಮ್ಮ ಒಂದು ಎಕರೆ ಜಮೀನಿನಲ್ಲಿ 2021- 22ನೇ ಸಾಲಿನಲ್ಲಿ ಡ್ರಾಗನ್ ಫೂಟ್ ಸಸಿ ನಾಟಿ ಮಾಡಿದ್ದರು. ಆಗ ಡ್ರಾಗನ್ ಫೂಟ್ ಬೆಳೆಯಲು ಮುಂದಾದಾಗ ಕೈ ಹಿಡಿದಿದ್ದು ನರೇಗಾ ಯೋಜನೆ. ನರೇಗಾ ಯೋಜನೆಯಡಿ ತೋಟಗಾರಿಕೆ ಇಲಾಖೆ ಮೂಲಕ ದೊರೆತ ಸಹಾಯಧನದಿಂದ ಒಂದು ಎಕರೆಯಲ್ಲಿ 35ರೂಪಾಯಿಗೆ ಒಂದರಂತೆ 1700 ಸಸಿಗಳನ್ನು ತಂದು ನೆಟ್ಟಿದ್ದರು. ನೆಟ್ಟ ವರ್ಷ ಹೊರತು ಪಡಿಸಿದರೆ ನಂತರದ ಮೂರು ವರ್ಷಗಳಲ್ಲಿ ಕ್ರಮವಾಗಿ 1.50 ಲಕ್ಷ, 2.50 ಲಕ್ಷ ಕೈ ಸೇರಿದೆ. ಈ ವರ್ಷ ಈಗಾಗಲೇ 2.50 ಲಕ್ಷ ಆದಾಯ ಕೈ ಸೇರಿದ್ದು ಇನ್ನು ಎರಡು ಲಕ್ಷ ರೂಪಾಯಿಗಳ ಆದಾಯದ ನಿರೀಕ್ಷೆಯಲ್ಲಿ ರೈತ ಮೈಲಾರೆಪ್ಪ ಇದ್ದಾರೆ.
ಮೈಲಾರೆಪ್ಪನವರ ಮಕ್ಕಳಾದ ಮರುಳಸಿದ್ದಪ್ಪ, ಭರತ, ನಿಂಗರಾಜ ಅವರು ಸಹ ಜಮೀನಿನ ಉಸ್ತುವಾರಿಯಲ್ಲಿದ್ದು ಪ್ರತಿ ವರ್ಷದ ಮಳೆಗಾಲದ ಸಮಯದಲ್ಲಿ ಲಕ್ಷಗಳ ಲೆಕ್ಕದಲ್ಲಿ ಡ್ರಾಗನ್ ಫೂಟ್ ಫಸಲು ಕಟಾವಿಗೆ ಬರುತ್ತಿರುವುದು ಅವರ ಹುಮ್ಮಸ್ಸನ್ನು ಇಮ್ಮಡಿಗೊಳಿಸಿದೆ. ಇನ್ನು ಡ್ರಾಗನ್ ಫೂಟ್ ಸಸಿಗಳನ್ನು ತಂದು ರೈತ ಮೈಲಾರೆಪ್ಪನವರು ನೆಡುವಾಗ ಈ ಭಾಗಕ್ಕೆ ಅದು ಹೊಸ ಹಣ್ಣು. ಕೊಂಡುಕೊಳ್ಳಲು ಹಣ್ಣಿನ ವ್ಯಾಪಾರಸ್ಥರು ಮಹಾನಗರಗಳಿಂದ ಹಾರೋಗೇರಿ ಗ್ರಾಮದ ತೋಟಕ್ಕೆ ಬರುತ್ತಿದ್ದಾರೆ. ಇದರಿಂದ ಸಾಗಣೆ ವೆಚ್ಚವು ಕಡಿಮೆಯಾಗಿದ್ದು, ಮನೆಯವರೇ ಕಟಾವಿನ ಕಾರ್ಯದಲ್ಲಿ ತೊಡಗಿಕೊಳ್ಳುತ್ತಾರೆ.
ನರೇಗಾ ಯೋಜನೆ ಒಳಗ ಡ್ರಾಗನ್ ಫೂಟ್ ಬೆಳೆಯಾಕ ಮಾಹಿತಿ ಸಿಕ್ತು. ವಿಚಾರಿಸಿದಾಗ ತಾಲೂಕು ಪಂಚಾಯತಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಅಗತ್ಯ ಮಾರ್ಗದರ್ಶನ ನೀಡಿದ್ರು, ಇದರಿಂದ ಚೊಲೊ ಆಗೇತ್ರಿ, ವರ್ಷ ಆದಾಯ ಲಕ್ಷದಾಗ ಕೈ ಸೇರಾಕತ್ತೈತ್ರಿ. – ಮೈಲಾರೆಪ್ಪ ಚೋಳಮ್ಮನವರ, ರೈತ