ಈ ತಿಂಗಳ ಅನ್ನಭಾಗ್ಯದ 170 ರೂ ಹಣ ಯಾರಿಗೆ ಬರುತ್ತದೆ ಇಲ್ಲಿ ಪಟ್ಟಿ ನೋಡಿ, ಮೊದಲು ನೀವು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ. https://ahara.kar.nic.in/WebForms/Show_Village_List.aspx
ನಂತರ ಈ ಚಿತ್ರದಲ್ಲಿ ಕಾಣುವ ಹಾಗೆ District, Taluk, Gram Panchayat, Village ಎಲ್ಲಿ select ಮಾಡಿಕೊಳ್ಳಿ. ನಂತರ Go ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ.
ಈ ಪಟ್ಟಿಯಲ್ಲಿ ಕಾಣುವ ಎಲ್ಲಾ ಜನರಿಗೆ ಈ ತಿಂಗಳ ಹಣ ಬರುತ್ತದೆ.
ಮಹಿಳಾ ಉದ್ಯಮಶೀಲತಾ ತರಬೇತಿಗೆ ಅರ್ಜಿ ಆಹ್ವಾನ
ಬಾಗಲಕೋಟೆ : ಸಮಾಜ ಕಲ್ಯಾಣ ಇಲಾಖೆಯಿಂದ 50 ಪರಿಶಿಷ್ಟ ಜಾತಿಯ ಮಹಿಳಾ ಪದವೀಧರರಿಗೆ ಉದ್ಯಮಗಳನ್ನು ಸ್ಥಾಪಿಸಲು ಉದ್ಯಮಶೀಲತಾ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಉದ್ಯಮಗಳನ್ನು ಸ್ಥಾಪಿಸಲು ಪೂರಕವಾಗುವಂತೆ ಪ್ರತಿಷ್ಠಿತ ಐ ಐ ಎಂ ಬೆಂಗಳೂರು ಇವರ ಮೂಲಕ ತರಬೇತಿಯನ್ನು ನೀಡಲಾಗುತ್ತಿದ್ದು, ಆಸಕ್ತ ಮಹಿಳಾ ಅಭ್ಯರ್ಥಿಗಳು ಜ.31 ರೊಳಗಾಗಿ ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ge www.sw.kar.nic.in ಸಲ್ಲಿಸಬಹುದಾಗಿದೆ. ಐ ಐ ಎಂ ಬೆಂಗಳೂರು ರವರು ಫೆಬ್ರುವರಿ 11 ರಂದು ನಡೆಸುವ ಸ್ತ್ರೀನಿಂಗ್ ಟೆಸ್ಟ್ ಮುಖಾಂತರ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಪ್ರಕಟಣೆಲ್ಲಿ ತಿಳಿಸಿದೆ.
ಜನವರಿ 21 ರಿಂದ 23ರವರೆಗೆ ಬೃಹತ್ ಕೃಷಿಮೇಳ
ಸುಸ್ಥಿರ ಕೃಷಿಗಾಗಿ ಬರ ನಿರ್ವಹಣೆ” ಘೋಷವಾಕ್ಯದೊಂದಿಗೆ ನಗರದ ಹೊರವಲಯದ ವಿಜಯಪುರದ ಹಿಟ್ನಳ್ಳಿ ಫಾರ್ಮ್ ನಲ್ಲಿ ಜನವರಿ 21 ರಿಂದ 23ವರೆಗೆ ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳ ಸಹಯೋಗದೊಂದಿಗೆ ಬೃಹತ್ ಕೃಷಿ ಮೇಳವನ್ನು ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಕೃಷಿ ಮೇಳ ಸಮಿತಿ ಅಧ್ಯಕ್ಷರು ಹಾಗೂ ಡೀನ್ ಡಾ. ಭೀಮಪ್ಪ ಎ ತಿಳಿಸಿದರು.
ಇಂದು ಕೃಷಿ ಮಹಾವಿದ್ಯಾಲಯದ ಸಮ್ಮೇಳನ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಆಧುನಿಕ ಕೃಷಿ ತಂತ್ರಜ್ಞಾನ ಮಾಹಿತಿಯ ಜೊತೆಗೆ ಬೃಹತ್ ವಸ್ತುಪ್ರದರ್ಶನ ಏರ್ಪಡಿಸಲಾಗಿದೆ. ರೈತರಿಗೆ ಆಧುನಿಕ ಬೇಸಾಯ ಕ್ರಮಗಳ ಕುರಿತಂತೆ ಕಾಲ- ಕಾಲಕ್ಕೆ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಆಗುತ್ತಿರುವ ನಿರಂತರ ಸಂಶೋಧನೆಗಳ ಫಲಿತಾಂಶಗಳನ್ನು ರೈತರಿಗೆ ತಲುಪಿಸುವಲ್ಲಿ ಕೃಷಿ ಮೇಳಗಳಂತಹ ಬೃಹತ್ ವಿಸ್ತರಣಾ ಕಾರ್ಯಕ್ರಮಗಳು ಬಹಳ ಮಹತ್ವವನ್ನು ಪಡೆದಿವೆ ಎಂದು ಹೇಳಿದರು.
ಜನವರಿ 21ರಂದು ಬೆಳಗ್ಗೆ 11 ಗಂಟೆಗೆ ಕೃಷಿ ಸಚಿವರಾದ ಎನ್. ಚೆಲುವರಾಯಸ್ವಾಮಿ ಕೃಷಿ ಮೇಳವನ್ನು ಉದ್ಘಾಟಿಸಲಿದ್ದಾರೆ. ನಾಗಠಾಣ ಮತಕ್ಷೇತ್ರದ ಶಾಸಕ ವಿಠಲ ಕಟಕಧೋಂಡ ಅಧ್ಯಕ್ಷತೆ ವಹಿಸುವರು. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಡಾ. ಎಂ. ಬಿ. ಪಾಟೀಲ ಅವರು ಕೃಷಿ ವಸ್ತು ಪ್ರದರ್ಶನದ ಉದ್ಘಾಟನೆ ಮಾಡಲಿದ್ದಾರೆ. ಕೃಷಿ ಪ್ರಕಟಣೆಗಳನ್ನು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್. ಪಾಟೀಲ ಬಿಡುಗಡೆಗೊಳಿಸುವರು. ಈ ಸಂದರ್ಭದಲ್ಲಿ ಜಿಲ್ಲೆಯ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು, ಕೃಷಿಕ ಸಮಾಜದ ಅಧ್ಯಕ್ಷರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಹಾಗೂ ಧಾರವಾಡ ಕೃಷಿ ವಿವಿ ಕುಲಪತಿ ಡಾ. ಪಿ.ಎಲ್. ಪಾಟೀಲ, ಕೃಷಿ ವಿವಿ ವ್ಯವಸ್ಥಾಪನಾ ಮಂಡಳಿ ಸದಸ್ಯರು ಉಪಸ್ಥಿತರಿರುವರು.
ರೈತರಿಗೆ ಆಶಾಕಿರಣವಾಗಿರುವ ಕೃಷಿಮೇಳಕ್ಕೆ ಬರ ಪರಿಸ್ಥಿತಿ ನಿರ್ವಹಣೆ ಸೇರಿದಂತೆ ಕೃಷಿಗೆ ಸಂಬಂಧಿಸಿದ ಮಾಹಿತಿ ಪಡೆದುಕೊಳ್ಳಲು ಹೆಚ್ಚಿನ ಸಂಖ್ಯೆಯಲ್ಲಿ ರೈತ ಬಾಂಧವರು ಆಗಮಿಸುವಂತೆ ಅವರು ಮನವಿ ಮಾಡಿಕೊಂಡರು. ಪತ್ರಿಕಾಗೋಷ್ಠಿಯಲ್ಲಿ ಸಹ ಸಂಶೋಧನಾ ನಿರ್ದೇಶಕ ಡಾ.ಅಶೋಕ ಎಸ್. ಸಜ್ಜನ, ಸಹ ವಿಸ್ತರಣಾ ನಿರ್ದೇಶಕ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷ ಡಾ.ಆರ್.ಬಿ. ಬೆಳ್ಳಿ ಉಪಸ್ಥಿತರಿದ್ದರು.
ಜವಾಹರ ನವೋದಯ ವಿದ್ಯಾಲಯದ ಪ್ರವೇಶ ಪರೀಕ್ಷೆ : ವಿಚಕ್ಷಕ ದಳದ ನೇಮಕ
ಗದಗ : ಜನವರಿ 20 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಜವಾಹರ ನವೋದಯ ವಿದ್ಯಾಲಯದ ಪ್ರವೇಶ ಪರೀಕ್ಷೆಗಳು ಜಿಲ್ಲೆಯ 18 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿವೆ. ಈ ಪರೀಕ್ಷೆ ಸುಗಮವಾಗಿ ಹಾಗೂ ನಿಷ್ಪಕ್ಷಪಾತವಾಗಿ ಜರುಗಲಿ ವಿಚಕ್ಷಕ ದಳವನ್ನು ನೇಮಕ ಮಾಡಲಾಗಿದೆ. ಜನವರಿ 20 ರಂದು ಜರುಗುವ ನವೋದಯ ವಿದ್ಯಾಲಯ ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷಾ ವೇಳೆಯಲ್ಲಿ ಭೇಟಿ ನೀಡಿ ಪರಿಶೀಲಿಸಬೇಕೆಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ವೈಶಾಲಿ ಎಂ.ಎಲ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೇಡ ಜಂಗಮ ಸಮಾಜದಿಂದ ಜ.21 ರಂದು ಉಚಿತ ವೈದ್ಯಕೀಯ ತಪಾಸಣೆ
ಹೊಸಪೇಟೆ : ನಗರದ ಜಗದ್ಗುರು ಕೊಟ್ಟೂರು ಸ್ವಾಮಿ ಮಠದಲ್ಲಿ ದಿನಾಂಕ 21 ಬಾನುವಾರ ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ವೀರಶೈವ ಲಿಂಗಾಯತ ಸಮಾಜದ ತಾಲೂಕು ಬೇಡ ಜಂಗಮ ಸಂಸ್ಥೆ ಹಮ್ಮಿಕೊಂಡಿದೆ. ಎಂದು ತಾಲೂಕು ಬೇಡ ಜಂಗಮ ಸಮಾಜದ ಅಧ್ಯಕ್ಷ ಎಸ್. ಎಂ.ಕಾಶಿನಾಥಯ್ಯ ಹೇಳಿದರು. ಅವರು ಇಂದು ಕೊಟ್ಟೂರು ಸ್ವಾಮಿ ಮಠದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಆರೋಗ್ಯ ತಪಾಸಣೆಯ ಮುಖ್ಯ ಉದ್ದೇಶ ವೆಂದರೆ ಬಡ ಹಾಘು ಆರ್ಥಿಕ ದುಃಸ್ಥಿತಿಯಲ್ಲಿನ ಜನರು ಬೇಗನೆ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಲು ಅಸಮರ್ಥರಾಗಿರುತ್ತಾರೆ. ಅಂತವರು ಈ ಶಿಬಿರದ ಉಪಯೋಗ ಪಡೆದು ಕೊಳ್ಳಲು ತಿಳಿಸಿದರು, ಧಾರವಾಡದ ಸತ್ತೂರಿನ ಎಸ್.ಡಿ.ಎಂ ನಾರಾಯಣಾ ಹೃದ್ರಾಲಯದ ತಜ್ಞ ವೈದ್ಯರು ಶಿಬಿರದಲ್ಲಿ ಪಾಲ್ಗೊಂಡು ವಿವಿದ ಕಾಯಿಲೆ ಗಳ ತಪಾಸಣೆ ನಡೆಸುವರು.
ಹೃದಯ ಶಸ್ತ್ರ ಚಿಕಿತ್ಸೆಗೆ ಸಂಭಂದಿಸಿದ ಇ.ಸಿ.ಜಿ. & 2ಡಿ,ಎಕೋ ಪರಿಕ್ಷೆಗಳನ್ನು ಉಚಿತವಾಗಿ ನಡೆಸಲಾಗುವುದು,ಅಲ್ಲದೆ ಇದರ ಜೊತೆಗೆ ಮೊಣಕಾಲು ನೋವು,ಕಿವಿ, ಮೂಗು, ಗಂಟಲು, ಬಿಪಿ, ಮದುಮೇಹ ಸಂಭಂದಿಸಿದ ಕಾಯಿಲೆಗಳಿಗೆ ತಪಾಸಣೆ ಯ ಜೊತೆಗೆ ಅಂದಿನ ಶಿಬಿರದಲ್ಲಿ ತಪಾಸಣೆ ನಡೆಸಿಕೊಂಡವರಿಗೆ ಔಷದ ವ್ಯಾಪಾರಿಗಳ ಸಂಘದಿಂದ ಉಚಿತ ಔಷಧಗಳನ್ನು ಕೂಡಾ ನೀಡಲಾಗುವುದೆಂದು, ತಾಲೂಕು ಬೇಡಜಂಗಮ ಸಮಾಜ ತಿಳಿಸಿದೆ.