Breaking
Tue. Dec 17th, 2024

ಯಾರಿಗೆ ಗೃಹಲಕ್ಷ್ಮೀ ಯೋಜನೆಯ ಮಾರ್ಚ್ ತಿಂಗಳ 7ನೇ ಕಂತಿನ ಹಣ ಬರಲ್ಲ?

Spread the love

ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣವು ಯಾರಿಗೆ ಬರುತ್ತದೆ ಮತ್ತು ಈ ಹಣವು ಯಾರಿಗೆ ಬರುವುದೆಲ್ಲ ಎಂದು ನೋಡುವ ಮಾಹಿತಿಯನ್ನು ಈ ಲೇಖನದಲ್ಲಿ ನಾವು ನಿಮಗೆ ತಿಳಿಸಿಕೊಡುತ್ತೇವೆ. ಗೃಹಲಕ್ಷ್ಮಿ ಯೋಜನೆಯ 7ನೇ ಕಂತು ಕೆಲವು ರೇಷನ್ ಕಾರ್ಡ್ ತಪ್ಪಾಗಿ ಹೊಂದಿರುವಂತಹ ಜನರಿಗೆ ಬರೋದಿಲ್ಲ ಏಕೆಂದರೆ ಅವುಗಳು ಅಧಿಕಾರಿಗಳಿಂದ ವೆರಿಫೈ ಮಾಡಿ ಮತ್ತು ರದ್ದಾಗಿರುತ್ತವೆ. ಆದಕಾರಣ ನಾವು ಕೆಳಗೆ ನೀಡಿರುವ ಎಲ್ಲ ಮಾಹಿತಿಗಳನ್ನು ನೋಡಿಕೊಂಡು ನಿಮಗೆ ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಯ ಈ ತಿಂಗಳಿನ ಹಣ ಬರುತ್ತದೆ ಇಲ್ಲವೋ ಎಂದು ಚೆಕ್ ಮಾಡಿಕೊಳ್ಳಿ.

ಯಾರಿಗೆ ಗೃಹಲಕ್ಷ್ಮೀ ಯೋಜನೆಯ ಮಾರ್ಚ್ ತಿಂಗಳ 7ನೇ ಕಂತಿನ ಹಣ ಬರುವುದಿಲ್ಲ?

ಮೊದಲು ನಾವು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ. https://ahara.kar.nic.in/Home/EServices ಮೇಲಿನ ಚಿತ್ರದಲ್ಲಿ ಕಾಣುವ ಹಾಗೆ ನಂತರ ಅಲ್ಲಿ ಮೇಲೆ ಕಾಣುವ ಮೂರು ಡಾಟ್ ಮೇಲೆ ಕ್ಲಿಕ್ ಮಾಡಿ.

ಆಮೇಲೆ ನೀವು e – ration card ಎಂಬ ಆಯ್ಕೇ ಮೇಲೆ ಕ್ಲಿಕ್ ಮಾಡಿ, ನಂತರ ನಿಮ್ಮ ಮುಂದೆ ಹೊಸ ಪರದೆ ಓಪನ್ ಆಗುತ್ತದೆ.

ಮೇಲಿನ ಚಿತ್ರದಲ್ಲಿ ಕಾಣುವ ಹಾಗೆ. Show Cancelled / Suspended list ಮೇಲೆ ಕ್ಲಿಕ್ ಮಾಡಿ.

ಆಗ ನೀವು Cancelled and Suspended List ನಲ್ಲಿ ನಿಮ್ಮ District, Taluk, Month, Year ಸೆಲೆಕ್ಟ್ ಮಾಡಿ Go ಎಂಬ ಆಯ್ಕೆ ಮೇಲೆ click ಮಾಡಿ. ಆಗ ನಿಮ್ಮುಂದೆ ಒಂದು ಲಿಸ್ಟ್ ಬರುತ್ತದೆ. ಅದರಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಯ ಈ ತಿಂಗಳಿನ ಹಣ ಬರುವುದಿಲ್ಲ.

ಯಾರಿಗೆ ಗೃಹಲಕ್ಷ್ಮೀ ಯೋಜನೆಯ ಮಾರ್ಚ್ ತಿಂಗಳ 7ನೇ ಕಂತಿನ ಹಣ ಬರುತ್ತದೆ?

ನಾವು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. https://ahara.kar.nic.in/Home/EServices ನೀವು ಮೇಲಿನ ಚಿತ್ರದಲ್ಲಿ ಕಾಣುವ ಹಾಗೆ ನಂತರ ಅಲ್ಲಿ ಮೇಲೆ ಕಾಣುವ ಮೂರು ಡಾಟ್ ಮೇಲೆ ಕ್ಲಿಕ್ ಮಾಡಿ. ನಂತರ ನೀವು e – ration card ಎಂಬ ಆಯ್ಕೇ ಮೇಲೆ ಕ್ಲಿಕ್ ಮಾಡಿ, ನಂತರ ನಿಮ್ಮ ಮುಂದೆ ಹೊಸ ಪರದೆ ಓಪನ್ ಆಗುತ್ತದೆ.

ಆಗ ನೀವು Village List ನಲ್ಲಿ District, Taluk Gram Panchayat , Village select ಮಾಡಿ go ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ.

ಆಗ ನಿಮ್ಮ ಮುಂದೆ ಒಂದು ಲಿಸ್ಟ್ ಬರುತ್ತದೆ. ಅದರಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಯ ಈ ತಿಂಗಳಿನ ಹಣ ಬರುತ್ತದೆ.

ಬ್ಯಾಡಗಿ ಮೆಣಸಿನಕಾಯಿ ದರ ಹಠಾತ್ ಕುಸಿತ

ರೈತರ ಆಕ್ರೋಶ ಬೆನ್ನಲ್ಲೇ ವರದಿ ಕೇಳಿದ ಸಿಎಂ. ಬ್ಯಾಡಗಿ ಮೆಣಸಿನಕಾಯಿ ಬೆಲೆ ಹಠಾತ್ ಕುಸಿತಗೊಂಡಿದ್ದು, ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದರ ಬೆನ್ನಲ್ಲೇ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಸೂಚನೆ ನೀಡಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದರ ಕುಸಿತಕ್ಕೆ ಕಾರಣವೇನೆಂದು ತಿಳಿದು, ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದೇನೆ. ವರದಿ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ರೈತರು ಅಗ್ನಿಶಾಮಕ ವಾಹನ ಸೇರಿದಂತೆ ಕನಿಷ್ಠ ಮೂರು ವಾಹನಗಳಿಗೆ ರೈತರು ಬೆಂಕಿ ಹಚ್ಚಿದ್ದಾರೆ. ಎಪಿಎಂಸಿ ಕಚೇರಿಯಲ್ಲಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ.ಸ್ಥಳಕ್ಕೆ ಆಗಮಿಸಿದ ಪೊಲೀಸ್ ಸಿಬ್ಬಂದಿ ಹಾಗೂ ಅಗ್ನಿಶಾಮಕ ವಾಹನವನ್ನು ಮಾರುಕಟ್ಟೆ ಒಳಗೆ ಪ್ರವೇಶಿಸದಂತೆ ತಡೆದಿದ್ದಾರೆ. ಈ ವೇಳೆ ಪೊಲೀಸರು ಮತ್ತು ರೈತರ ನಡುವೆ ವಾಗ್ವಾದ ನಡೆದಿದೆ.

ಕೆಲ ಹೊತ್ತಿನ ಬಳಿಕ ಪೊಲೀಸರು ಗುಂಪನ್ನು ಚದುರಿಸಿ ಪರಿಸ್ಥಿತಿಯನ್ನು ಹತೋಟಿಗೆ ಸಿದ್ದರಾಮಯ್ಯ ತಂದಿದ್ದಾರೆಂದು ಮಾಹಿತಿ ನೀಡಿದರು. ಗೃಹ ಸಚಿವ ಜಿ.ಪರಮೇಶ್ವರ ಅವರು ಮಾತನಾಡಿ, ಒಂದೇ ದಿನದಲ್ಲಿ ಮೆಣಸಿನಕಾಯಿ ಬೆಲೆ ಕ್ವಿಂಟಲ್ ಗೆ 20 ಸಾವಿರದಿಂದ 8 ಸಾವಿರಕ್ಕೆ ಕುಸಿದಿದ್ದು, ಹಾವೇರಿ ಎಪಿಎಂಸಿ ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಿದೆ. ಈ ರೀತಿಯ ಬೆಲೆ ಕುಸಿತ ಎಲ್ಲಾ ಎಪಿಎಂಸಿ ಮಾರುಕಟ್ಟೆಗಳಲ್ಲಿ ನಡೆದಿದೆಯೇ ಅಥವಾ ಹಾವೇರಿ ಮಾರುಕಟ್ಟೆಯಲ್ಲಿ ಮಾತ್ರವೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ.

ಹಾವೇರಿ ಜಿಲ್ಲೆಯ ಎಪಿಎಂಸಿ ಕಚೇರಿಗೆ ನುಗ್ಗಿ ಪೀಠೋಪಕರಣಗಳನ್ನು ಧ್ವಂಸಗೊಳಿಸಲಾಗಿದೆ. ಕರ್ನಾಟಕ ಮತ್ತು ನೆರೆಯ ಆಂಧ್ರಪ್ರದೇಶದ ರೈತರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಬ್ಯಾಡಗಿ ಮಾರುಕಟ್ಟೆಗೆ ಆಗಮಿಸಿದ್ದು, ಮೆಣಸಿನಕಾಯಿ ಬೆಲೆಯಲ್ಲಿ ದಿಢೀರ್ ಕುಸಿತ ಕಂಡು ಆಘಾತಕ್ಕೊಳಗಾಗಿದ್ದಾರೆ. ಹಿಂಸಾಚಾರದಲ್ಲಿ 12 ವಾಹನಗಳು ಸುಟ್ಟು ಕರಕಲಾಗಿವೆ. ಪ್ರಕರಣ ದಾಖಲಾಗಿದ್ದು, ಇದುವರೆಗೆ 25ಕ್ಕೂ ಹೆಚ್ಚು ರೈತರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.

Agri jobs

Related Post

Leave a Reply

Your email address will not be published. Required fields are marked *